ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾಜ್ಯದ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಿ: ಸಿಎಂಗೆ ಗುರಿಕಾರ ಮನವಿ

ಧಾರವಾಡ: ರಾಜ್ಯ ಆಯವ್ಯಯ (ಬಜೆಟ್) ಮಂಡನೆಯ ಸಂಧರ್ಭದಲ್ಲಿ ರಾಜ್ಯದ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರಿಯಾ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ರಾಜ್ಯದ ಶಿಕ್ಷಕರ, ಉಪನ್ಯಾಸಕರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಪ್ರತ್ಯೇಕ ವೇತನ ಆಯೋಗ ರಚಿಸಬೇಕು ಹಾಗೂ ರಾಜಸ್ಥಾನ ಸರ್ಕಾರ ರಾಜ್ಯ ಬಜೆಟ್ ಮಂಡನೆ ಸಂದರ್ಭದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದೆ. ತಾವು ಸಹ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಬಜೆಟ್ ಮಂಡನೆ ಸಂದರ್ಭದಲ್ಲಿ ಘೋಷಣೆ ಮಾಡಬೇಕೆಂದು ವಿನಂತಿಸಿದ್ದಾರೆ.

1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಎಲ್ಲ ಶಾಲೆ, ಕಾಲೇಜು, ವೃತ್ತಿ ತರಬೇತಿ ಸಂಸ್ಥೆಗಳನ್ನು ತಕ್ಷಣ ಅನುದಾನಕ್ಕೆ ಒಳಪಡಿಸಿ, ಅನುದಾನ ರಹಿತ ಶಾಲೆ, ಕಾಲೇಜ್ ಶಿಕ್ಷಕರು ನೆಮ್ಮದಿಯಿಂದ ಜೀವನ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಬೇಕಾಗಿ ವಿನಂತಿ. ಅನುದಾನಿತ ಅನುದಾನ ರಹಿತ ಶಾಲೆ, ಕಾಲೇಜು, ವೃತ್ತಿ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಪಿಂಚಣಿ ಸೌಲಭ್ಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕೆಂದಿದ್ದಾರೆ.

ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಇನ್ನೂ ಬಗೆಹರಿಯದೇ ಇರುವದರಿಂದ ನಿವೃತ್ತಿಯಾಗುವ ಶಿಕ್ಷಕರುಗಳಿಗೆ ತೊಂದರೆಯಾಗಿದೆ. ತಕ್ಷಣ ಈ ಸಮಸ್ಯೆ ಬಗೆಹರಿಸಬೇಕಾಗಿ ವಿನಂತಿ. ಸರ್ಕಾರಿ ಶಿಕ್ಷಕರುಗಳಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಖಾಸಗಿ ಕ್ಷೇತ್ರದಲ್ಲಿ ಕಾವ್ಯ ಮಾಡುವ ಶಿಕ್ಷಕರುಗಳಿಗೆ ಯಥಾವತ್ತಾಗಿ ಮಂಜೂರ ಮಾಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

24/02/2022 07:01 pm

Cinque Terre

3.95 K

Cinque Terre

0

ಸಂಬಂಧಿತ ಸುದ್ದಿ