ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕಾಯಕ ಶರಣರ ಜಯಂತಿ ಆಚರಿಸಲಾಯಿತು.
ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಭಾವಚಿತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್. ಎನ್.ರುದ್ರೇಶ್ ಅವರು ಪೂಜೆ ಹಾಗೂ ಪುಷ್ಪಾರ್ಪಣೆ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಮುಖಂಡರಾದ ಲಕ್ಷ್ಮಣ ಬಕ್ಕಾಯಿ, ಮಹಾದೇವ ದೊಡ್ಡಮನಿ, ಮಹೇಶ್ ಹುಲ್ಲೆನ್ನವರ, ಅಶೋಕ ಭಂಡಾರಿ, ಮಾರ್ಕಂಡೇಯ ದೊಡ್ಡಮನಿ, ಯಲ್ಲಪ್ಪ ಸವಣೂರ ಹಾಗೂ ಇತರರು ಭಾಗವಹಿಸಿದ್ದರು.
Kshetra Samachara
01/03/2022 09:59 pm