ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕ ಅರವಿಂದ ಬೆಲ್ಲದ ಅವರಿಂದ ಜಿಲ್ಲಾ ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ

ಧಾರವಾಡ: ಧಾರವಾಡ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಧಾರವಾಡದ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದ ಆವರಣದಲ್ಲಿ ಇಂದಿನಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ ಕೈಗಾರಿಕಾ ವಸ್ತು ಪ್ರದರ್ಶನವನ್ನು ಶಾಸಕ ಅರವಿಂದ ಬೆಲ್ಲದ ಉದ್ಘಾಟಿಸಿದರು.

ಕೈಗಾರಿಕಾ ಇಲಾಖೆಯಿಂದ ಮಾರ್ಚ್ 7 ರವರೆಗೆ ಕೈಗಾರಿಕಾ ವಸ್ತು ಪ್ರದರ್ಶನ ಆಯೋಜಿಸಲಾಗಿದ್ದು, 62 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಗೃಹ ಕೈಗಾರಿಕಾ, ಕೈಮಗ್ಗ, ಕಸೂತಿ ಸೇರಿದಂತೆ ವಿವಿಧ ರೀತಿಯ ಸಣ್ಣ ಮತ್ತು ಅತೀ ಸಣ್ಣ ಉದ್ಯಮಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ.

ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ, ಉದ್ಯಮ, ಉದ್ಯಮಿಯ ಸಾಧನೆ ಬಗ್ಗೆ ಮಾಹಿತಿ ಪಡೆದು, ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ರೆಷ್ಮೆ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಈರಣ್ಣ ಜಡಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ಕೈಗಾರಿಕಾ ಇಲಾಖೆ ಉಪ ನಿರ್ದೇಶಕ ಡಾ.ಭೀಮಪ್ಪ ಎನ್.ಎಮ್.,ಜಿ.ಪಂ ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಚಂದ್ರಪ್ಪ ಸೇರಿದಂತೆ ಇತರರು ಇದ್ದರು.

Edited By : PublicNext Desk
Kshetra Samachara

Kshetra Samachara

03/03/2022 10:12 pm

Cinque Terre

7.49 K

Cinque Terre

0

ಸಂಬಂಧಿತ ಸುದ್ದಿ