ಧಾರವಾಡ: ಧಾರವಾಡ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರು, ಉತ್ತಮ ರಸ್ತೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಗ್ರಾಮಸ್ಥರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.
ಧಾರವಾಡ ತಾಲೂಕಿನ ಕನಕೂರು ಹಾಗೂ ಚಂದನಮಟ್ಟಿ ಗ್ರಾಮಗಳಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈಗಾಗಲೇ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದರು.
ಅದಕ್ಕೂ ಮೊದಲು ಕರ್ನಾಟಕ ನೀರಾವರಿ ನಿಗಮ ನಿಯಮಿತ 2021-22 ಸಾಲಿನ ಅನುದಾನದಡಿಯಲ್ಲಿ ಕನಕೂರು ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ನಂತರ 2021-22 ಚಂದನಮಟ್ಟಿ ಗ್ರಾಮದ ಎಸ್‌ಟಿ ಕಾಲೊನಿ ಹಾಗೂ ಕಾಲೊನಿಗೆ ಸಂಪರ್ಕಿಸುವ ರಸ್ತೆಗಳ ಕಾಂಕ್ರೀಟಿಕರಣ, ಪಕ್ಕಾ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ಸಲ್ಲಿಸಿ ಚಾಲನೆ ನೀಡಿದರು.
ತದನಂತರ ಸರ್ಕಾರಿ ಯೋಜನೆಗಳಾದ ವೃದ್ಯಾಪ ವೇತನ, ವಿಧವಾ ವೇತನ ಸೇರಿದಂತೆ ಅನೇಕ ಯೋಜನೆಗಳ ಸದುಪಯೋಗ ಪಡೆದುಕೊಂಡು ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸಂತೋಷ ಬಿರಾದಾರ್, ಮುಖಂಡರಾದ ಗುರುನಾಥಗೌಡ ಗೌಡರ, ಗ್ರಾಪಂ ಅಧ್ಯಕ್ಷೆ ರೇಣುಕಾ ಶಂಕ್ರಪ್ಪ ಆರೆನ್ನವರ್, ಉಪಾಧ್ಯಕ್ಷರಾದ ಚನ್ನಬಸಪ್ಪ ಕವಳಿ, ಶಿವು ಬೆಳ್ಳಾರದ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.
Kshetra Samachara
05/03/2022 07:57 pm