ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮುಕ್ಕಲ್ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮ ವಾಸ್ತವ್ಯವನ್ನು ಮಾರ್ಚ್ ತಿಂಗಳ 19ರ 3ನೇ ಶನಿವಾರದಂದು ನಡೆಸಬೇಕಾಗಿತ್ತು. ಆದರೆ, ಅಂದು ಹೋಳಿ ಹಬ್ಬ ಇರುವುದರಿಂದ ಮಾರ್ಚ್ 21 ರಂದು ಈ ಕಾರ್ಯಕ್ರಮವನ್ನು ನಡೆಸಲಾಗುವುದು.

ಮಾರ್ಚ್ 21 ರಂದು ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ನಡೆಸುವರು. ಧಾರವಾಡ ತಾಲೂಕಿನ ಅಂಬ್ಲಿಕೊಪ್ಪ ಗ್ರಾಮದಲ್ಲಿ, ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ, ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದಲ್ಲಿ, ನವಲಗುಂದ ತಾಲೂಕಿನ ಅರಹಟ್ಟಿ ಗ್ರಾಮದಲ್ಲಿ, ಅಣ್ಣಿಗೇರಿ ತಾಲೂಕಿನ ದುಂದೂರ ಗ್ರಾಮದಲ್ಲಿ, ಅಳ್ನಾವರ ತಾಲೂಕಿನ ಬೆನಚಿ ಗ್ರಾಮದಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಗ್ರಾಮ ವಾಸ್ತವ್ಯ ನಡೆಸುವರು.

ತಾಲೂಕಿನ ತಹಶೀಲ್ದಾರೊಂದಿಗೆ ಎಲ್ಲ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಿದ್ದು ಸಾರ್ವಜನಿಕರ ಕಾರ್ಯಸೂಚಿಗಳನ್ವಯ ಸ್ಥಳದಲ್ಲಿಯೇ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿ ಸಂಬಂಧಿಸಿದ ಫಲಾನುಭವಿಗಳಿಗೆ ಪರಿಹಾರ ನೀಡಲು ಅಹವಾಲುಗಳಿಗೆ, ಬೇಡಿಕೆಗಳಿಗೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/03/2022 06:50 pm

Cinque Terre

6.33 K

Cinque Terre

0

ಸಂಬಂಧಿತ ಸುದ್ದಿ