ಧಾರವಾಡ: ಧಾರವಾಡ ತಾಲೂಕಿನ ಲೋಕೂರು ಗ್ರಾಮದಲ್ಲಿ ಶಾಸಕ ಅಮೃತ ದೇಸಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಧಾರವಾಡ ಅನುದಾನದ ಅಡಿಯಲ್ಲಿ ಲೋಕೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ, ಗ್ರಾಮದಲ್ಲಿ ವ್ಯಾಯಾಮ (ಜಿಮ್) ಶಾಲಾ ನಿರ್ಮಾಣ ಕಾಮಗಾರಿ, ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆಯಿಂದ ಮನೆ ಮನೆಗೆ ಗಂಗೆ ಯೋಜನೆಯಡಿ ಅಂದಾಜು 1.4 ಕೋಟಿ ಅನುದಾನದಲ್ಲಿ ಕುಡಿಯುವ ನೀರು ಪೂರೈಸುವ ಯೋಜನೆ, ಲೋಕೋಪಯೋಗಿ ಇಲಾಖೆಯಿಂದ ನಿರ್ಮಿತವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದರು.
ಅಮೃತ್ ದೇಸಾಯಿ ಗೆಳೆಯರ ಬಳಗದಿಂದ ಹಮ್ಮಿಕೊಂಡ ಆಶಾ ಅಂಗನವಾಡಿ ಮತ್ತು ಪಂಚಾಯತ ಸಿಬ್ಬಂದಿಗೆ ಪ್ರಶಂಶನಾ ಪತ್ರ ಹಾಗೂ ಸಹಾಯ ಧನ ವಿತರಿಸಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ, ಮಂಜುನಾಥ ನರಸಿಂಗನವರ, ಚಂಬಣ್ಣ ಬಾಗಲಕೋಟೆ, ಬಸವರಾಜ ಹಿರೇಹಳ್ಳಿ ಸೇರಿದಂತೆ ಅನೇಕರು ಇದ್ದರು.
Kshetra Samachara
13/04/2022 10:18 pm