ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಪ್ರಸಕ್ತ ವರ್ಷ ಸಂಭ್ರಮದಿಂದ ಬಸವ ಜಯಂತಿ ಆಚರಿಸಲು ನಿರ್ಧಾರ

ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ, ಧಾರವಾಡ ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ಬಾರಿ ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಮೇ.3 ರಂದು ಬಸವ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಬಸವ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳ ಕಾಲ ಎಲ್ಲಾ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಸಂಭ್ರಮದಿಂದ ಅರ್ಥಪೂರ್ಣವಾಗಿ ಹಮ್ಮಿಕೊಳ್ಳೋಣ. ಬೆಳಿಗ್ಗೆ 8 ಗಂಟೆಗೆ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭಿಸಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವುದು. ಸಂಜೆ 5 ಗಂಟೆಗೆ ಕ.ವಿ.ವ. ಸಂಘದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮಗಳು, ಉಪನ್ಯಾಸ ಜರುಗಲಿವೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ವಚನ ಗಾಯನ, ಸಮೂಹ ನೃತ್ಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಸರ್ಕಾರದ ಅನುದಾನ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ ನೆರವಿನಿಂದ ಸುಮಾರು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಜಯಂತಿ ಆಚರಿಸಲಾಗುವುದು. ಜಿಲ್ಲೆಯ ಜನತೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು‌.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಮಹಾನ್ ಮಾನವತಾವಾದಿ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಶಹರ ಹಾಗೂ ಜಿಲ್ಲೆಯ ಎಲ್ಲಾ ಸಮಾಜಗಳ ಬಾಂಧವರು ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಶಿವಾನಂದ ಭಾವಿಕಟ್ಟಿ, ಶಂಕರ ಕುಂಬಿ, ಡಾ.ಮಹೇಶ ಹೊರಕೇರಿ ಸೇರಿದಂತೆ ಇತರರು ಇದ್ದರು.

Edited By : PublicNext Desk
Kshetra Samachara

Kshetra Samachara

22/04/2022 10:38 pm

Cinque Terre

10.99 K

Cinque Terre

0

ಸಂಬಂಧಿತ ಸುದ್ದಿ