ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿವಶರಣರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಕರೆ

ಧಾರವಾಡ: ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇ ತಿಂಗಳಲ್ಲಿ ಜರುಗುವ ವಿವಿಧ ಸಮುದಾಯದ ಶಿವ ಶರಣರ ಜಯಂತಿಗಳನ್ನು ಸರ್ಕಾರದ ಅನುದಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.

ಶಂಕರಾಚಾರ್ಯ, ಭಗೀರಥ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶ್ರೀ ಶಂಕರಾಚಾರ್ಯ ಜಯಂತಿಯನ್ನು ಮೇ 6 ರಂದು ಸಂಜೆ 5.30 ಕ್ಕೆ ಆಲೂರು ವೆಂಕಟರಾವ ಸಭಾಭವನದಲ್ಲಿ, ಶ್ರೀ ಭಗೀರಥ ಜಯಂತಿಯನ್ನು ಮೇ 8 ರಂದು ಬೆಳಿಗ್ಗೆ 11 ಗಂಟೆಗೆ ಆಲೂರು ವೆಂಕಟರಾವ ಸಭಾಭವನ ಅಥವಾ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10 ರಂದು ಬೆಳಿಗ್ಗೆ 11 ಗಂಟೆಗೆ ಸಾರಸ್ವತಪುರ ರೆಡ್ಡಿ ಕಾಲೊನಿಯ ವೆಂಕಟೇಶ್ವರ ದೇವಸ್ಥಾನದ ಸಭಾಭವನದಲ್ಲಿ ಉಪನ್ಯಾಸ ಮತ್ತು ಸಂಗೀತ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದರು.

ಶೋಭಾಯಾತ್ರೆ ಅಥವಾ ಮೆರವಣಿಗೆಯನ್ನು ಆಯಾ ಸಮಾಜ, ಸಂಘ ಸಂಸ್ಥೆಗಳು ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಬೇಕು. ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬ್ರಾಹ್ಮಣ ಸಮುದಾಯದ ಅಧ್ಯಕ್ಷ ಆರ್.ಡಿ ಕುಲಕರ್ಣಿ, ಉಪ್ಪಾರ ಸಮುದಾಯದ ಅಧ್ಯಕ್ಷ ಶಿವಪ್ಪ ನೀರಾವರಿ, ರೆಡ್ಡಿ ಸಮುದಾಯದ ಅಧ್ಯಕ್ಷ ಡಾ.ಎಚ್.ಎಲ್. ಮಂಕಣಿ ಸೇರಿದಂತೆ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

28/04/2022 07:55 pm

Cinque Terre

6.63 K

Cinque Terre

0

ಸಂಬಂಧಿತ ಸುದ್ದಿ