ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಡಿಮೆ ಪ್ರಮಾಣದ ಪಡಿತರ ವಿತರಿಸಿದರೆ ಕ್ರಮ

ಧಾರವಾಡ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 20 ಕೆಜಿ ಅಕ್ಕಿ,15 ಕೆಜಿ ಜೋಳ, ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ ‌ತಲಾ 3 ಕೆಜಿ ಅಕ್ಕಿ ಹಾಗೂ 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ. ಕಳೆದ ಎಪ್ರಿಲ್‌ನಿಂದ ಗೋದಿ ಹಂಚಿಕೆ ಸ್ಥಗಿತಗೊಳಿಸಲಾಗಿದೆ. ಕೆಲವೆಡೆ ಗೋಧಿ ದಾಸ್ತಾನು ಉಳಿದಿದ್ದು, ಆದ್ಯತೆಯ ಮೇಲೆ ಮೊದಲು ಬಂದ ಕಾರ್ಡುದಾರರಿಗೆ ಪ್ರತಿ ಕಾರ್ಡಿಗೆ 2 ಕೆಜಿ ಗೋಧಿ ವಿತರಿಸಲಾಗುವುದು.

ಗ್ರಾಹಕರು ಹಂಚಿಕೆಯಾಗಿರುವ ಪಡಿತರವನ್ನು ನಿಗದಿತ ಸರಿಯಾದ ಪ್ರಮಾಣದಲ್ಲಿ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಆಹಾರ ಧಾನ್ಯ ನೀಡಿದರೆ ಜಿಲ್ಲಾಧಿಕಾರಿಗಳ ಕಚೇರಿಯ ಆಹಾರ ಶಾಖೆ ದೂರವಾಣಿ ಸಂಖ್ಯೆ 0836-2444594 ಮಾಹಿತಿ ನೀಡಿದರೆ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸುಧೀರ್ ಸಾವ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

07/05/2022 07:23 pm

Cinque Terre

5.28 K

Cinque Terre

0

ಸಂಬಂಧಿತ ಸುದ್ದಿ