ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಕರ ಕ್ಷೇತ್ರದ ಚುನಾವಣೆ: ಆಯುಧ, ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

ಧಾರವಾಡ: ಚುನಾವಣಾ ಸಮಯದಲ್ಲಿ ಧಾರವಾಡ ಜಿಲ್ಲೆಯಲ್ಲಿಯ ಆಯುಧ ಲೈಸೆನ್ಸದಾರರು, ತಾವು ಹೊಂದಿರುವ ಆಯುಧ, ಶಸ್ತ್ರಾಸ್ತ್ರಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ತಕ್ಷಣದಿಂದ ನಿಷೇಧಿಸಿದೆ. ಲೈಸೆನ್ಸದಾರರು ತಾವು ವಾಸಿಸುವ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಆಯುಧ, ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಆಯುಧಗಳನ್ನು ಠೇವಣಿ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ನೀಡಲು ಮತ್ತು ಚುನಾವಣೆ ಫಲಿತಾಂಶ ಹೊರಬಿದ್ದ ಒಂದು ವಾರದ ನಂತರ ಸಂಬಂಧಿಸಿದವರಿಗೆ ಆಯುಧವನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲು ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಆರಕ್ಷಕ ಅಧೀಕ್ಷಕರು, ಧಾರವಾಡ ಜಿಲ್ಲೆ, ಇವರಿಗೆ ನಿರ್ದೇಶನ ನೀಡಲಾಗಿದೆ .

ಈ ಆದೇಶವು ಸರ್ಕಾರಿ ಸೇವೆಯಲ್ಲಿ ನಿರತರಾಗಿರುವ ಅಧಿಕಾರಿ, ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ. ಬ್ಯಾಂಕ್ ಹಾಗೂ ಇನ್ನಿತರ ರಾಷ್ಟ್ರೀಕೃತ ಅಥವಾ ಖಾಸಗಿ ಸಂಸ್ಥೆಗಳ ಸುರಕ್ಷತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ .

ಈ ಆದೇಶ ಉಲ್ಲಂಘಿಸಿದವರನ್ನು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಾಯ್ದೆ 1973 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಅಡಿ ದಂಡನೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

14/05/2022 08:40 am

Cinque Terre

4.36 K

Cinque Terre

0

ಸಂಬಂಧಿತ ಸುದ್ದಿ