ಧಾರವಾಡ: ಚಂಡಮಾರುತ ಎಫೆಕ್ಟ್‌ನಿಂದಾಗಿ ಧಾರವಾಡದಾದ್ಯಂತ ಬಿರುಸಿನ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದಲೇ ಆರಂಭವಾಗಿರುವ ಮಳೆ ಬಿಟ್ಟೂ ಬಿಡದೇ ಸುರಿಯುತ್ತಿದೆ.
ಮಳೆಯ ಪರಿಣಾಮ ಧಾರವಾಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಮುಂಗಾರು ಪ್ರವೇಶಕ್ಕೂ ಮುನ್ನವೇ ಚಂಡಮಾರುತ ಎಫೆಕ್ಟ್‌ನಿಂದಾಗಿ ಜಡಿ ಮಳೆ ಸುರಿಯುತ್ತಿದೆ.
ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನ, ಜೀವನ ಅಸ್ತವ್ಯಸ್ಥಗೊಂಡಿದೆ. ಈ ಮಳೆ ಕಳೆದ ಎರಡು ವರ್ಷಗಳ ಹಿಂದೆ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯನ್ನು ನೆನಪಿಸುತ್ತಿದೆ.
Kshetra Samachara
19/05/2022 11:34 am