ಧಾರವಾಡ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸಿಇಟಿ ಪರೀಕ್ಷೆಗಳು ಧಾರವಾಡದ 9 ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ಮೇ 21 ಹಾಗೂ ಇಂದು (ಮೇ.22) ಎರಡು ದಿನಗಳ ಕಾಲ ಕಟ್ಟುನಿಟ್ಟಾಗಿ ಶಿಸ್ತು ಬದ್ಧವಾಗಿ ನಡೆದವು.
ಮೇ.21 ಶನಿವಾರ ಬೆಳಿಗ್ಗೆ ಸಾಮಾನ್ಯ ಅಧ್ಯಯನದ ಪರೀಕ್ಷೆಗೆ 2270 ನೋಂದಾಯಿತ ಅಭ್ಯರ್ಥಿಗಳಲ್ಲಿ 1644 ಅಭ್ಯರ್ಥಿಗಳು ಹಾಜರಾಗಿದ್ದರು, 626 ಅಭ್ಯರ್ಥಿಗಳು ಗೈರಾಗಿದ್ದರು.
ಮೇ.21 ಶನಿವಾರ ಮಧ್ಯಾಹ್ನ ಆಂಗ್ಲ ಭಾಷಾ ವಿಷಯದ ಪರೀಕ್ಷೆಯು 02 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿತು. 401 ನೋಂದಾಯಿತ ಅಭ್ಯರ್ಥಿಗಳಲ್ಲಿ 299 ಅಭ್ಯರ್ಥಿಗಳು ಹಾಜರಾಗಿ,102 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
ಮೇ.22 ಭಾನುವಾರ ಗಣಿತ, ವಿಜ್ಞಾನ, ಜೀವ ವಿಜ್ಞಾನ ಮತ್ತು ಸಮಾಜ ಪಾಠಗಳ ವಿಷಯದ ಪರೀಕ್ಷೆಯು ಬೆಳಗಿನ ಅವಧಿಯಲ್ಲಿ 09 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿತು. 2134 ನೋಂದಾಯಿತ ಅಭ್ಯರ್ಥಿಗಳಲ್ಲಿ 1525 ಅಭ್ಯರ್ಥಿಗಳು ಹಾಜರಾಗಿದ್ದರು, 609 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
ಮಧ್ಯಾಹ್ನ ನಡೆದ ವಿವರಣಾತ್ಮಕ ಪರೀಕ್ಷೆಯಲ್ಲಿ 2134 ನೋಂದಾಯಿತ ಅಭ್ಯರ್ಥಿಗಳಲ್ಲಿ 1525 ಅಭ್ಯರ್ಥಿಗಳು ಹಾಜರಾಗಿದ್ದರು, 609 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ, ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಹೆಸ್ಕಾಂ, ದೈಹಿಕ ಶಿಕ್ಷಣ ಶಿಕ್ಷಕರು, ಪರೀಕ್ಷಾ ಕೇಂದ್ರದಲ್ಲಿನ ಎಲ್ಲ ಅಧಿಕಾರಿಗಳು, ಸಿಬ್ಬಂದಿಯ ಸಹಕಾರದಿಂದ ಎರಡು ದಿನಗಳ ಕಾಲ ಪರೀಕ್ಷೆಗಳು ಯಶಸ್ವಿಯಾಗಿ ಜರುಗಿದವು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
23/05/2022 05:32 pm