ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಎಎಸ್ ಅಧಿಕಾರಿಗಳ ಸಂಘದ ರಾಜ್ಯ ಕೋಶಾಧ್ಯಕ್ಷರಾಗಿ ತಹಶೀಲ್ದಾರ ಡಾ.ಸಂತೋಷ ಬಿರಾದಾರ ಆಯ್ಕೆ

ಧಾರವಾಡ: ಕರ್ನಾಟಕ ರಾಜ್ಯ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳ ಸಂಘದ ರಾಜ್ಯ ಕೋಶಾಧ್ಯಕ್ಷರಾಗಿ ಎರಡು ವರ್ಷಗಳ ಅವಧಿಗೆ ಧಾರವಾಡ ತಹಶೀಲ್ದಾರ ಡಾ.ಸಂತೋಷ ಬಿರಾದಾರ ಆಯ್ಕೆಯಾಗಿದ್ದಾರೆ.

ನಿನ್ನೆ ಜರುಗಿದ ರಾಜ್ಯ ಕೆಎಎಸ್ ಅಧಿಕಾರಿಗಳ ಸಂಘದ ವಾರ್ಷಿಕ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ರಾಜ್ಯ ಕೆಎಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳನ್ನು‌ ಆಯ್ಕೆ ಮಾಡಲಾಗಿದೆ.

ನೂತನ ಅಧ್ಯಕ್ಷರಾಗಿ ಡಾ.ರವಿ ತಿರ್ಲಾಪುರ, ಉಪಾಧ್ಯಕ್ಷರಾಗಿ ಎಂ.ಕೆ.ಜಗದೀಶ, ಕೋಶಾಧ್ಯಕ್ಷರಾಗಿ ಡಾ.ಸಂತೋಷ ಬಿರಾದಾರ, ಡಾ.ಬಿ.ಆರ್.ಹರೀಶ್ ನಾಯ್ಕ, ಜಂಟಿ ಕಾರ್ಯದರ್ಶಿಯಾಗಿ ಡಾ. ನಾಗೇಂದ್ರ ಹಿನ್ನಳ್ಳಿ ಆಯ್ಕೆಯಾಗಿದ್ದಾರೆ.

ನೂತನ ಕೋಶಾಧ್ಯಕ್ಷರಾಗಿ ಆಯ್ಕೆ ಆಗಿರುವ ಡಾ. ಸಂತೋಷ ಬಿರಾದಾರ ಅವರನ್ನು ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಧಾರವಾಡ ಜಿಲ್ಲಾ ಕಂದಾಯ ನೌಕರರ ಸಂಘದ ಅಧ್ಯಕ್ಷ ರವಿ ಕಟ್ಟಿ, ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಆನಂದ ಆನಿಕಿವಿ, ತಾಲೂಕಾ ಅಧ್ಯಕ್ಷ ವೆಂಕಟೇಶ ಹಟ್ಟಿಯವರ ಸೇರಿದಂತೆ ವಿವಿಧ ನೌಕರ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

30/05/2022 10:18 pm

Cinque Terre

7.43 K

Cinque Terre

0

ಸಂಬಂಧಿತ ಸುದ್ದಿ