ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತಮ ಆರೋಗ್ಯ ಅಭಿವೃದ್ಧಿಗೆ ರಹದಾರಿ: ಡಾ.ಬಿ.ಗೋಪಾಲಕೃಷ್ಣ

ಧಾರವಾಡ: ಉತ್ತಮ ಆರೋಗ್ಯ ಅಭಿವೃದ್ಧಿಗೆ ರಹದಾರಿಯಾಗಿದೆ. ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ಚಿಕಿತ್ಸೆ ಒದಗಿಸುವುದು ಆರೋಗ್ಯ ಶಿಬಿರದ ಉದ್ದೇಶವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಬಿ. ಗೋಪಾಲಕೃಷ್ಣ ಹೇಳಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ರೋಟರಿ ಪರಿವಾರ ಸಹಯೋಗದಲ್ಲಿ ಧಾರವಾಡದ ಪಾಲಿಕೆಯ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧಾರವಾಡ ಅನೇಕ ವೈದ್ಯ ವೃಂದವು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಬಡವರ, ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರವು ಉಪಯುಕ್ತವಾಗಿದೆ. ಕೋವಿಡ್ ನಂತರ ಆರೋಗ್ಯ ಸೇವೆಯಲ್ಲಿ ಅನೇಕ ಬದಲಾವಣೆಗಳನ್ನು ಕಂಡಿದ್ದೇವೆ. ಇಂತಹ ಉಚಿತ ಆರೋಗ್ಯ ಶಿಬಿರವನ್ನು ಪ್ರತಿ ತಿಂಗಳು ಮಾಡುವ ಸದುದ್ದೇಶವಿದೆ. ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಇಂದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರ ಸಹಕಾರಿಯಾಗಿದೆ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗೋವಾದ ರೋಟರಿ ಗವರ್ನರ್ ಗೌರೀಶ ಮಾತನಾಡಿ, ಬಡತನ ರೇಖೆಗಿಂತ ಕೆಳಗಿರುವ ಸಾಮಾನ್ಯ ಜನತೆಗೆ ಇಂತಹ ವೈದ್ಯಕೀಯ ಸೇವಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಧಾರವಾಡ ವೈದ್ಯ ವೃಂದವು ಅತ್ಯುತ್ತಮ ಸೇವೆ ನೀಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಆಸ್ಪತ್ರೆಗಳಲ್ಲಿ ಗುಣಮಟ್ಟದ ಯಂತ್ರೋಪಕರಣ ಸೌಲಭ್ಯಗಳಿವೆ ಎಂದರು.

ವೇದಿಕೆಯ ಮೇಲೆ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ.ರಾಜನ್ ದೇಶಪಾಂಡೆ, ರೋಟರಿ ಪರಿವಾರ ಅಧ್ಯಕ್ಷ ವಿಜಯಕುಮಾರ ಕಟ್ಟಿಮನಿ, ಮಹಾನಗರಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ, ಡಾ.ಶೋಭಾ ಮೂಲಿಮನಿ, ಡಾ.ಸತೀಶ ಇರಕಲ್, ವಿವಿಧ ರೋಟರಿ ಕ್ಲಬ್ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಹಾನಗರ ಪಾಲಿಕೆ ಸಿಬ್ಬಂದಿ, ಪೌರಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಹಿಮೋಗ್ಲೋಬಿನ್, ರಕ್ತದ ಗುಂಪು, ಸಕ್ಕರೆ ಪ್ರಮಾಣ, ಥೈರಾಯ್ಡ್ ಪರೀಕ್ಷೆ, ಎಚ್‍ಬಿಎ1ಸಿ (ಸಕ್ಕರೆ ಕಾಯಿಲೆ ಪರೀಕ್ಷೆ), ಅಲ್ಟ್ರಾಸೋನೋಗ್ರಫಿ, ಇಸಿಜಿ ಹೃದಯದ ಪರೀಕ್ಷೆ, ಎಲುಬು ಸಾಂದ್ರತೆ, ಸ್ತ್ರೀಯರಲ್ಲಿ ಬರುವ ಕ್ಯಾನ್ಸರ್ ಕಾಯಿಲೆಯ ಪರೀಕ್ಷೆ ಪತ್ತಗೆ ಪ್ಯಾಪ್ ಸ್ಮಿಯರ್ ಪರೀಕ್ಷೆ ಮಾಡಿಸಿಕೊಂಡರು.

ಪ್ರಸೂತಿ ಹಾಗೂ ಸ್ತ್ರೀರೋಗ, ಚಿಕ್ಕ ಮಕ್ಕಳ, ಡಯಾಬಿಟಿಸ್ ಮತ್ತು ಹೃದಯರೋಗ, ಎಲುಬು ಮತ್ತು ಕೀಲು, ಶಸ್ತ್ರಚಿಕಿತ್ಸಾ ಹಾಗೂ ನೇತ್ರ ಚಿಕಿತ್ಸಾ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ಸೇವೆ ನೀಡಿದರು.

Edited By : PublicNext Desk
Kshetra Samachara

Kshetra Samachara

30/05/2022 10:21 pm

Cinque Terre

40.63 K

Cinque Terre

0

ಸಂಬಂಧಿತ ಸುದ್ದಿ