ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: SSLCಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಧಾರವಾಡ: ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬಂದಿದೆ. ಬರುವ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ದಾಖಲಿಸಲು ಈಗಿನಿಂದಲೇ ಸ್ಪಷ್ಟ ಕ್ರಿಯಾ ಯೋಜನೆ ಹಾಕಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ನಂತರ ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾದ ಕೋರ್ಸುಗಳ ಆಯ್ಕೆ ಮಾಡಿ ಅಧ್ಯಯನ ಮಾಡುವ ಸ್ವಾತಂತ್ರ್ಯವನ್ನು ಪಾಲಕರು ಮಕ್ಕಳಿಗೆ ನೀಡಬೇಕು. ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ನಂತರ ಸ್ವತಂತ್ರ ನಿರ್ಧಾರ ಕೈಗೊಳ್ಳುವ ಜಾಣ್ಮೆ, ಜವಾಬ್ದಾರಿ ಬೆಳೆಸಿಕೊಳ್ಳಬೇಕು

ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಪಂ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ 2021-22 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಆಸಕ್ತಿ, ಅಭಿರುಚಿಗೆ ಅನುಗುಣವಾಗಿ ಭವಿಷ್ಯ ರೂಪಿಸಲು ಪಾಲಕರು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ಅಧ್ಯಯನದ ವಿಷಯ, ವೃತ್ತಿ ಆಯ್ದುಕೊಳ್ಳಲು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಬೇಕು. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದಿದೆ. ಬರುವ ವರ್ಷ ಎಸ್ಸೆಸ್ಸೆಲ್ಸಿ ಮಕ್ಕಳ ಫಲಿತಾಂಶದಲ್ಲಿ ಇನ್ನಷ್ಟು ಸುಧಾರಣೆ ತರಲು ಸ್ಪಷ್ಟ ಕ್ರಿಯಾ ಯೋಜನೆ ತಯಾರಿಸಿಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಿನಿಂದಲೇ ಪ್ರಯತ್ನ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಮಾತನಾಡಿ, ಇಂದಿನ ಮಕ್ಕಳ ಅಂಕಗಳಿಕೆಯ ಪ್ರಮಾಣ ನೋಡಿದರೆ ಇನ್ನು ಮುಂದೆ ಸ್ಪರ್ಧೆಯ ಗುಣಮಟ್ಟ ಹೆಚ್ಚಾಗುತ್ತದೆ. ಯಶಸ್ಸಿನ‌ ಅಹಂ‌ ತಲೆಗೆ ಏರಿಸಿಕೊಳ್ಳದೇ ಭವಿಷ್ಯ ರೂಪಿಸಿಕೊಳ್ಳಲು ಕಠಿಣ ಪರಿಶ್ರಮ ಮುಂದುವರೆಸಬೇಕು. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ನಮ್ಮನ್ನು ನಾವು ಸಿದ್ಧಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ 29,569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 25,120 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 84.95 ರಷ್ಟು ಸಾಧನೆ ಮಾಡಲಾಗಿದೆ. ಓರ್ವ ವಿದ್ಯಾರ್ಥಿ 625, ಆರು ಜನ 624 ಹಾಗೂ ಏಳು ಜನ 623 ಅಂಕಗಳನ್ನು ಗಳಿಸಿ ರಾಜ್ಯದ ಮೊದಲ ಮೂರು ರ್ಯಾಂಕ್ ವಿಜೇತರ ಸಾಲಿನಲ್ಲಿ ಇದ್ದಾರೆ.

ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದವರಲ್ಲಿ ಒಬ್ಬರಾಗಿರುವ ಹುಬ್ಬಳ್ಳಿ ಚೇತನ್ ಪಬ್ಲಿಕ್ ಶಾಲೆ ವಿದ್ಯಾರ್ಥಿ ಶಿವಾನಂದ ಬಿ ಪಾಟೀಲ ಸನ್ಮಾನಿತರ ಪರವಾಗಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಗುರಿಯನ್ನು ತಲುಪಲು ಕಠಿಣ ಪರಿಶ್ರಮವೊಂದೇ ಮಾರ್ಗವಾಗಿದೆ ಎಂದರು.

ಪವನ್ ಆಂಗ್ಲ ಮಾಧ್ಯಮ ಶಾಲೆಯ ಅಭಿಷೇಕ ಅಡಕೆ ಮಾತನಾಡಿ, ಶಾಲೆಯಲ್ಲಿ ಶಿಕ್ಷಕರ ಪಾಠ ಬೋಧನೆಯೊಂದರಿಂದಲೇ ಈ ಸಾಧನೆ ಸಾಧ್ಯವಾಗಿದೆ. ಕಠಿಣ ಪರಿಶ್ರಮವಿದ್ದರೆ ಟ್ಯೂಷನ್ ಅಗತ್ಯವಿಲ್ಲ ಎಂದರು.

Edited By : PublicNext Desk
Kshetra Samachara

Kshetra Samachara

02/06/2022 10:25 pm

Cinque Terre

6.79 K

Cinque Terre

1

ಸಂಬಂಧಿತ ಸುದ್ದಿ