ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವೈದ್ಯಾಧಿಕಾರಿಯ ವರ್ಗಾವಣೆ ಆದೇಶ ಹಿಂಪಡೆಯಲು ಯರಗುಪ್ಪಿ ಆಗ್ರಹ

ನವಲಗುಂದ : ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾದ ಡಾ.ರೂಪಾ ಕಿಣಗಿಯವರ ವರ್ಗಾವಣೆಯ ಆದೇಶವನ್ನು ಹಿಂಪಡೆಯುವಂತೆ ಉತ್ತರ ಕರ್ನಾಟಕ ಪರಿವರ್ತನ ಸಮುದಾಯದ ಅಧ್ಯಕ್ಷ ಮಾಬುಸಾಬ ಯರಗುಪ್ಪಿ ಅವರು ಆಗ್ರಹಿಸಿ, ಮನವಿ ನೀಡಿದರು.

ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿ ಮಾತನಾಡಿದ ಅವರು, ಡಾ.ರೂಪಾ ಕಿಣಗಿಯವರನ್ನು ಏಕಾ-ಏಕಿ ಕಲಘಟಗಿಯ ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಿರುವುದು ನಮ್ಮ ಗಮನಕ್ಕೆ ಬಂದಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಅವರನ್ನು ಮೊದಲಿದ್ದ ನವಲಗುಂದ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಮುಖ್ಯ ವೈದ್ಯಾಧಿಕಾರಿಯಾಗಿ ಮುಂದುವರೆಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುವುದೆಂದು ಮಾಬುಸಾಬ ಯರಗುಪ್ಪಿ ಅವರು ಮನವಿ ಪತ್ರದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/06/2022 07:39 pm

Cinque Terre

9.47 K

Cinque Terre

0

ಸಂಬಂಧಿತ ಸುದ್ದಿ