ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಣ್ಣಿಗೇರಿಯಲ್ಲಿ ಆಯೋಜಿಸಲಾಗಿದೆ.
ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನದ ಆವರಣದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸವನ್ನು ಅಂದು ಬೆಳಿಗ್ಗೆ 6.45 ಕ್ಕೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಯೋಗಾಸಕ್ತರು, ವಯೋಭೇದವಿಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.
ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು, ಶಾಲೆ ಕಾಲೇಜು, ಹಾಸ್ಟೇಲ್ ವಿದ್ಯಾರ್ಥಿಗಳು ಪೋಲೀಸ್ ಸಿಬ್ಬಂದಿ, ಜಿಲ್ಲೆಯ ತಾಲೂಕು ಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿಯವರು, ಜಿಲ್ಲೆಯ ವಿವಿಧ ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎನ್.ಎಸ್.ಎಸ್. ಘಟಕ, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಎನ್. ಸಿ. ಸಿ ಘಟಕ ಹಾಗೂ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುವುದು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೀನಾಕ್ಷಿ ಅವಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
10/06/2022 07:43 pm