ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಕವಾಡದಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಧಾರವಾಡ: ರಾಜ್ಯ ಸರ್ಕಾರದ ನಿರ್ದೇಶನದಂತೆ ಹಮ್ಮಿಕೊಂಡಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದಡಿ ಜೂನ್ 18 ರಂದು ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ಆಯೋಜಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಾಲೂಕಿನ ತಹಶೀಲ್ದಾರರು ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಆಯೋಜಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಲಘಟಗಿ ತಹಶೀಲ್ದಾರ ಯಲ್ಲಪ್ಪ ಗೊಣ್ಣೆನ್ನವರ ಅವರು ಹನಮಾಪುರ ಗ್ರಾಮದಲ್ಲಿ, ಧಾರವಾಡ ತಹಶೀಲ್ದಾರ್ ಸಂತೋಷ ಬಿರಾದಾರ ಅವರು ತೇಗೂರ ಗ್ರಾಮದಲ್ಲಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಅವರು ಪಾಳೆ ಗ್ರಾಮದಲ್ಲಿ, ನವಲಗುಂದ ತಹಶೀಲ್ದಾರ ಅನಿಲ ಬಡಿಗೇರ ಅವರು ಅಹೆಟ್ಟಿ ಗ್ರಾಮದಲ್ಲಿ, ಕುಂದಗೋಳ ತಹಶೀಲ್ದಾರ ಅಶೋಕ ಶಿಗ್ಗಾಂವಿ ಅವರು ಯಲಿವಾಳ ಗ್ರಾಮದಲ್ಲಿ ಮತ್ತು ಅಳ್ನಾವರ ತಹಶೀಲ್ದಾರ ಅಮರೇಶ ಪಮ್ಮಾರ ಅವರು ಡೋರಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಲಿದ್ದಾರೆ.

Edited By : PublicNext Desk
Kshetra Samachara

Kshetra Samachara

16/06/2022 06:55 pm

Cinque Terre

5.13 K

Cinque Terre

0

ಸಂಬಂಧಿತ ಸುದ್ದಿ