ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಹಾಗೂ ಪ.ಪಂ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇಲಾಖೆಯ ವೆಬ್‍ಸೈಟ್ www.bcwd.karnataka.govi.in ನಲ್ಲಿ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 30 ರೊಳಗಾಗಿ ಭೇಟಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ 080-8050370006 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/06/2022 09:51 pm

Cinque Terre

8.11 K

Cinque Terre

0

ಸಂಬಂಧಿತ ಸುದ್ದಿ