ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು (ಶೈಕ್ಷಣಿಕ) ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆದ ಸಿ.ಇ.ಟಿ ಮತ್ತು ನೀಟ್‍ನಲ್ಲಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್‍ಸೈಟ್ kmdconline.karnataka.gov.in ನಲ್ಲಿ ಅರ್ಜಿ ಸಲ್ಲಿಸಿ, ಮೂಲ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 20 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರವರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಧಾರವಾಡ ಮೌಲಾನಾ ಆಝಾದ ಭವನ, ಸರ್ಕಾರಿ ಮುದ್ರಣಾಲಯದ ಹತ್ತಿರ, ಸಾಧನಕೇರಿ ರಸ್ತೆ, ಧಾರವಾಡ-580008 ಕಚೇರಿಯ ದೂರವಾಣಿ 0836-2748226 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/06/2022 09:55 pm

Cinque Terre

10.01 K

Cinque Terre

0

ಸಂಬಂಧಿತ ಸುದ್ದಿ