ಧಾರವಾಡ: ಐಸಿಐಸಿಐ ಬ್ಯಾಂಕ್‍ನಿಂದ ರೂಪಿಸಿರುವ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನಾ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ಬಾವುಟವನ್ನು ತೋರಿಸುವ ಮೂಲಕ ಚಾಲನೆ ನೀಡಿದರು.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಕುರಿತ ಪ್ರಚಾರ ವಾಹನವು ಜುಲೈ 1 ರಿಂದ 7 ರವರೆಗೆ ಜಿಲ್ಲೆಯಾದ್ಯಂತ ಸಂಚರಿಸಿ ರೈತರಲ್ಲಿ ವಿಮೆ ಯೋಜನೆ ಕುರಿತು ಜಾಗೃತಿ ಮೂಡಿಸಲಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಅಳ್ನಾವರ ತಹಶೀಲ್ದಾರ ಅಮರೇಶ ಪಮ್ಮಾರ, ಕೃಷಿ ಇಲಾಖೆಯ ಜಂಟಿ ನಿರ್ದೆಶಕ ರಾಜಶೇಖರ ಐ. ಬಿಜಾಪೂರ ಹಾಗೂ ಐಸಿಐಸಿಐ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/07/2022 09:23 pm