ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿಭಾಗಮಟ್ಟದಲ್ಲಿ ವಿಶೇಷ ಸಾಧನೆಗೈದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ; ಜಡಿ

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಬಾಲ ವಿಕಾಸ ಅಕಾಡೆಮಿಯು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ ನೀಡಿ, ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ, ಬರುವ ಜುಲೈ 2 ರಂದು ಧಾರವಾಡದ ಆಲೂರು ವೆಂಕಟರಾವ ಸಾಂಸ್ಕೃತಿಕ ಸಭಾಭವನದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡಮಿ ಅಧ್ಯಕ್ಷ ಈರಣ್ಣ ಜಡಿ ಹೇಳಿದರು.

ಬಾಲ ವಿಕಾಸ ಅಕಾಡೆಮಿ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಕಾಡೆಮಿಯು ರಾಜ್ಯದಲ್ಲಿರುವ ಒಟ್ಟು 34 ಶೈಕ್ಷಣಿಕ ಜಿಲ್ಕೆಗಳಲ್ಲಿಯೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಮೊದಲ ಐದು ಮಕ್ಕಳಿಗೆ 5 ಸಾವಿರ ನಗದು ಬಹುಮಾನ ನೀಡಿ, ಗೌರವಿಸಲಾಗುವುದು. ಬೆಳಗಾವಿ ವಿಭಾಗದ ಮಟ್ಟದ 9 ಶೈಕ್ಷಣಿಕ ಜಿಲ್ಲೆಗಳಿಂದ ಈಗ ವಿದ್ಯಾರ್ಥಿಗಳಿಗೆ ಗೌರವಿಸಲಾಗುತ್ತಿದೆ. ಉಳಿದ ಮೂರು ವಿಭಾಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

ಅಕಾಡೆಮಿಯಿಂದ ವಿವಿಧೋದ್ದೇಶ ಸಭಾಭವನ ಕಟ್ಟಡದ ಕಾಮಗಾರಿಯು ಕೊನೆಯ ಹಂತದಲ್ಲಿದ್ದು, ಅದನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಅದನ್ನು ನಾಡಿನ ಮಕ್ಕಳ ಚಟುವಟಿಕೆ ಕೇಂದ್ರವನ್ನಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಬಾಲ ವಿಕಾಸ ಅಕಾಡಮಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳ ಕ್ರಯಾಯೋಜನೆ ರೂಪಿಸಲಾಗಿದೆ. ಅಕಾಡಮಿಯಿಂದ ಕಥಾಕಮ್ಮಟ, ವಿಭಾಗ ಮಟ್ಟದ ಮಕ್ಕಳ ಹಬ್ಬ, ದಕ್ಷಿಣ ರಾಜ್ಯಗಳ ಮಕ್ಕಳ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ರಾಜ್ಯದ ಎಲ್ಲ ವಿಭಾಗಗಳಲ್ಲಿ ಮಕ್ಕಳ ಪ್ರತಿಭೋತ್ಸವ, ಮಕ್ಕಳ ಹಬ್ಬ, ಪಾಲೋತ್ಸವ, ಗಡಿಭಾಗದ ಮಕ್ಕಳಿಗೆ ಪ್ರತಿಭೋತ್ಸವ, ಮಕ್ಕಳ ರಂಗೋತ್ಸವ, ಕ್ರೀಡೋತ್ಸವ, ಕಾವ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಿಲು ಯೋಜನೆ ಸಿದ್ಧಗೊಳಿಸಲಾಗಿದೆ.

ಬಾಲ ಮಂದಿರ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ ಆಯೋಜನೆ ಮತ್ತು ವಿಶೇಷಚೇತನ ಮಕ್ಕಳಿಗೆ ಪ್ರತ್ಯೇಕವಾಗಿ ಪ್ರತಿಭೋತ್ಸವ ಹಮ್ಮಿಕೊಳ್ಳಲಾಗುವುದು ಎಂದು ಅಧ್ಯಕ್ಷ ಈರಣ್ಣ ಜಡಿ ಅವರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

01/07/2022 09:28 pm

Cinque Terre

7.04 K

Cinque Terre

0

ಸಂಬಂಧಿತ ಸುದ್ದಿ