ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ, ಮಹಾನಗರ ಪಾಲಿಕೆ, ಕೃಷಿ ಇಲಾಖೆ ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 2022-23 ನೇ ಸಾಲಿನ ಫಲ-ಪುಷ್ಪ ಪ್ರದರ್ಶನ ಅಂಗವಾಗಿ ಅವಳಿ ನಗರಗಳಲ್ಲಿ ಸೆಪ್ಟಂಬರ್ 28 ರಿಂದ 30 ರವರೆಗೆ ಸರ್ಕಾರಿ ಸಂಸ್ಥೆ, ಅರೆ ಸರ್ಕಾರಿ ಸಂಸ್ಥೆ, ಖಾಸಗಿ ಸಂಸ್ಥೆ ಹಾಗೂ ಖಾಸಗಿ ಮನೆ ಉದ್ಯಾನವನಗಳ ಸರ್ಧೆಯನ್ನು ಏರ್ಪಡಿಸಲಾಗಿದೆ.
ಆಸಕ್ತರು ಸೆಪ್ಟಂಬರ್ 15 ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ 0836-2957801 ಸಂಪರ್ಕಿಸಬಹುದು ಎಂದು ತೋಟಗಾರಿಕಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
11/07/2022 10:00 pm