ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ: ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಧಾರವಾಡ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಗೆ ಕೈಗಾರಿಕೆ ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಉತ್ಪಾದನೆ ವಲಯಕ್ಕೆ 50 ಲಕ್ಷ ರೂಪಾಯಿವರೆಗೆ ಮತ್ತು ಸೇವಾ ವಲಯಕ್ಕೆ 20 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಧಾರವಾಡ ಜಿಲ್ಲೆಯ ಆಸಕ್ತ ಯುವಕ, ಯುವತಿಯರು www.kviconline.gov.in/pmegpeportal ಮೂಲಕ ಅರ್ಜಿ ಸಲ್ಲಿಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ 0836-2322627, ಕೈಗಾರಿಕಾ ವಿಸ್ತರಣಾಧಿಕಾರಿ, ಹುಬ್ಬಳ್ಳಿ, ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ (9902412428) ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ, ಧಾರವಾಡ, ಕಲಘಟಗಿ ಹಾಗೂ ಅಳ್ನಾವರ (9886251096) ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

15/07/2022 09:51 pm

Cinque Terre

10.5 K

Cinque Terre

0

ಸಂಬಂಧಿತ ಸುದ್ದಿ