ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮ: ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಧಾರವಾಡ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸ್ವಯಂ ಉದ್ಯೋಗ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 50 ಸಾವಿರಗಳವರೆಗೆ ಆರ್ಥಿಕ ನೆರವು ನೀಡಲಾಗುವುದು. ಶೇ.20ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಆಸಕ್ತರು https://suvidha.karnataka.gov.in ಜಾಲತಾಣದಲ್ಲಿ ಅಗಸ್ಟ್ 24 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ನಿಗಮದ ವೆಬ್‍ಸೈಟ್ https://dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೂ ದೂರವಾಣಿ 9606066389 ಅಥವಾ 8824300400 ಮತ್ತು 0836-2957829 ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

15/07/2022 09:53 pm

Cinque Terre

10.61 K

Cinque Terre

0

ಸಂಬಂಧಿತ ಸುದ್ದಿ