ಧಾರವಾಡ: ಧಾರವಾಡ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ 20 ರಂದು ಕಲಘಟಗಿ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಜುಲೈ 22 ರಂದು ಧಾರವಾಡ ತಾಲೂಕು ಪಂಚಾಯತ ಸಭಾಭವನದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಜುಲೈ 20 ರಂದು ತಾಲೂಕು ಕಾನೂನು ಸೇವೆಗಳ ಸಮಿತಿ, ಕಲಘಟಗಿ ಕಂದಾಯ ಇಲಾಖೆ, ಕಲಘಟಗಿ ತಾಲೂಕು ಪಂಚಾಯತ ಸಂಯುಕ್ತಾಶ್ರಯದಲ್ಲಿ ಕಲಘಟಗಿ ತಾಲೂಕಾ ಪಂಚಾಯತ ಸಭಾಭವನದಲ್ಲಿ ತಾಲೂಕಾ ಮಟ್ಟದ ಎಲ್ಲ ಅಧಿಕಾರಿ ಮತ್ತು ನೌಕರರಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮತ್ತು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಭೇಟಿಯ ದಿನದಂದು ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸಬೇಕೆಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸತೀಶ್ ಚಿಟಗುಬ್ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
16/07/2022 07:23 pm