ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಗುತ್ತಿಗೆದಾರರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರ ಸಂಘದ ಅಧ್ಯಕ್ಷ ಸುಭಾಸ ಪಾಟೀಲ ದೂರಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇತ್ತೀಚೆಗೆ ಸಿವಿಲ್ ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಕರೆದು ದಿನಾಂಕ ನಿಗದಿ ಮಾಡಿದ್ದರು.
ಆದರೆ, ಮತ್ತೆ ಹೊಸ ಆದೇಶ ಹೊರಡಿಸಿ, ಗುತ್ತಿಗೆದಾರರ ಕ್ಷೇಮ ನಿಧಿಯ ಬಗ್ಗೆ ಮಾತ್ರ ಚರ್ಚಿಸಲಾಗುವುದು ಎಂದು ತಿಳಿಸುವ ಮೂಲಕ ಸಭೆಗೆ ಗುತ್ತಿಗೆದಾರರನ್ನು ಆಹ್ವಾನಿಸಿಲ್ಲ. ಉತ್ತರ ಕರ್ನಾಟಕ ಗುತ್ತಿಗೆದಾರರನ್ನು ಉದ್ದೇಶ ಪೂರಕವಾಗಿ ಹೊರಗಿಟ್ಟು ಸಭೆ ನಡೆಸಲಾಗುತ್ತಿದೆ. ಇದರಿಂದ ಈ ಭಾಗದ ಗುತ್ತಿಗೆದಾರರಿಗೆ ಅನ್ಯಾಯವಾಗಲಿದೆ ಎಂದು ಪಾಟೀಲ ಅವರು ಆರೋಪಿಸಿದ್ದಾರೆ.
Kshetra Samachara
22/07/2022 10:18 pm