ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಮುಖ ರಸ್ತೆಗಳು ಶೀಘ್ರವೇ ಸುಧಾರಣೆ ಕಾಣಲಿವೆ: ಶಾಸಕ ಅಮೃತ ದೇಸಾಯಿ

ಧಾರವಾಡ: ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಶಾಸಕ ಅಮೃತ ದೇಸಾಯಿ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಧಾರವಾಡ 71ರ ಕ್ಷೇತ್ರದಲ್ಲಿ ಅತೀ ಹೆಚ್ಚು ಅನುದಾನ ತರುವ ಮೂಲಕ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಜನರ ಸಹಕಾರ ಮತ್ತು ಪಕ್ಷಾತೀತ ಬೆಂಬಲವೇ ಈ ಅಭಿವೃದ್ಧಿಗೆ ಪ್ರಮುಖ ಕಾರಣವಾಗಿದೆ ಎಂದರು.

ಬರುವ ದಿನಗಳಲ್ಲಿ ಧಾರವಾಡ ಗ್ರಾಮೀಣ ಭಾಗದ ಬಾಕಿ ಉಳಿದಿರುವ ಎಲ್ಲ ಪ್ರಮುಖ ರಸ್ತೆಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸುವ ಕಾರ್ಯ ನಡೆಯಲಿದೆ. ರಸ್ತೆಗಳ ಗುಣಮಟ್ಟದ ಕಾಮಗಾರಿಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕಂದಾಯ ಇಲಾಖೆ ಸಹಯೋಗದಲ್ಲಿ ಗರಗ ಗ್ರಾಮದ ನಾಡ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ, ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಗರಗ ಗ್ರಾಮದ ಪರಿಮಿತಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಅಂತರರಾಷ್ಟ್ರೀಯ ರೋಟರಿ ಫೌಂಡೇಶನ್ ಮತ್ತು ಟಾಟಾ ಮಾರ್ಕೊಪೊಲೊ ಮೋಟರ್ಸ್ ಲಿಮಿಟೆಡ್‌ ಸಂಯುಕ್ತ ಆಶ್ರಯದಲ್ಲಿ ಗರಗ ಶಾಲೆಯಲ್ಲಿ ನಿರ್ಮಿಸಿದ ಶೌಚಾಲಯ ಕಟ್ಟಡ ಉದ್ಘಾಟನೆ ಮಾಡಲಾಯಿತು.

ಮುಜರಾಯಿ ಇಲಾಖೆಯಿಂದ ಗರಗದ ಕಲ್ಮಠ ಗುರು ಮಡಿವಾಳೇಶ್ವರ ಮಠದ ಜೀರ್ಣೋದ್ಧಾರ ಕಾಮಗಾರಿಗೆ 5 ಲಕ್ಷ ರೂಪಾಯಿ ಚೆಕ್‌ನ್ನು ಮಠದ ಟ್ರಸ್ಟ್‌ಗೆ ವಿತರಣೆ ಮಾಡಲಾಯಿತು.

Edited By : PublicNext Desk
Kshetra Samachara

Kshetra Samachara

26/07/2022 09:52 pm

Cinque Terre

3.13 K

Cinque Terre

0

ಸಂಬಂಧಿತ ಸುದ್ದಿ