ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಟಿವಿ ಕೌಶಲ್ಯ ತರಬೇತಿಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಜಾಂಬವಂತ ಅಭಿವೃದ್ಧಿ ನಿಗಮದಿಂದ ಕೌಶಲ್ಯ ತರಬೇತಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಪರಿಶಿಷ್ಟ ಜಾತಿಯ ಜನಾಂಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮೆರಾಮ್ಯಾನ್, ನಿರೂಪಣೆ, ವರದಿಗಾರಿಕೆ ಮತ್ತು ಕಾಪಿ ಎಡಿಟರ್, ಬುಲೇಟಿಂಗ್ ಪ್ರೊಡ್ಯೂಸರ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾ ವ್ಯವಸ್ಥಾಪಕರು ಕಚೇರಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಧಾರವಾಡ ಇವರಿಗೆ ಜುಲೈ 30 ರೊಳಗಾಗಿ ಮತ್ತು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಧಾರವಾಡ ಇವರಿಗೆ ಆಗಸ್ಟ್ 10 ರೊಳಗಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ, ಅರ್ಜಿ ಸಲ್ಲಿಸಬಹುದು. ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2447151 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

28/07/2022 10:09 pm

Cinque Terre

8.22 K

Cinque Terre

1

ಸಂಬಂಧಿತ ಸುದ್ದಿ