ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರ: ನಾಳೆ ಸಮಾಲೋಚನಾ ಸಭೆ

ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಅವರ ಅಧ್ಯಕ್ಷತೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆಯ ಸಮಾಲೋಚನಾ ಸಭೆಯು ನಾಳೆ (ಜು.31) ಬೆಳಿಗ್ಗೆ 11 ಗಂಟೆಗೆ ಧಾರವಾಡದ ಸರ್ಕಾರಿ ಅತಿಥಿ ಗೃಹ (ಸರ್ಕೀಟ್ ಹೌಸ್)ದಲ್ಲಿ ಜರುಗಲಿದೆ.

ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಅವರ ಅಧ್ಯಕ್ಷತೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ.

ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕನ್ನಡಪರ ಸಂಘ-ಸಂಸ್ಥೆಗಳು ಸಭೆಗೆ ಹಾಜರಾಗಿ ಸಲಹೆ, ಸೂಚನೆಗಳನ್ನು ನೀಡಿ ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

30/07/2022 09:41 pm

Cinque Terre

10.52 K

Cinque Terre

0

ಸಂಬಂಧಿತ ಸುದ್ದಿ