ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತಿ ಮನೆ ಮೇಲೂ ತ್ರಿವರ್ಣ ಧ್ವಜ ಹಾರಾಡುವಂತಾಗಲಿ: ಶಾಸಕ ಅಮೃತ ದೇಸಾಯಿ

ಧಾರವಾಡ: 75ನೇ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಹರ್‌ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು. ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ವಾರ್ಡ್‌ನ ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಮೋದಿಯವರ ಕರೆಗೆ ಬೆಂಬಲ ಸೂಚಿಸಬೇಕು ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

ಧಾರವಾಡದ ನಂದಿಕೋಲ ಬಸವಣ್ಣ ಕಲ್ಯಾಣ ಮಂಟಪದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಕುರಿತು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ವಿವಿಧ ಬೂತ್ ಅಧ್ಯಕ್ಷರ ಸಮ್ಮುಖದಲ್ಲಿ ಬುಧವಾರ ನಡೆದ ಮಹಾ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಗಸ್ಟ್ 15 ದೇಶದ ಪ್ರತಿಯೊಬ್ಬ ಪ್ರಜೆಗಳು ಹೆಮ್ಮೆ ಪಡುವ ದಿನವಾಗಿದ್ದು, ಸ್ವಾತಂತ್ರ್ಯದ ಸವಿ ನೆನಪಿಗಾಗಿ ಪ್ರಧಾನಿ ಮೋದಿಯವರು ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂಬ ಕರೆಯನ್ನು ನೀಡಿದ್ದಾರೆ. ಅದರ ಸಾಕಾರಕ್ಕೆ ಎಲ್ಲರೂ ಕೈಜೋಡಿಸಬೇಕು. ಈಗಾಗಲೇ ಈ ಕುರಿತು ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಎಲ್ಲ ಬೂತ್‌ನ ಪ್ರಮುಖರು ಹಾಗೂ ಮುಖಂಡರಿಗೆ ರಾಷ್ಟ್ರಧ್ವಜ ನೀಡಲಾಗಿದೆ. ತಮ್ಮ ವ್ಯಾಪ್ತಿಯ ಎಲ್ಲ ಮನೆಗಳ ಮೇಲೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಶಿವಾನಂದ ಗುಂಡಗೋವಿ, ಶಂಕರ ಕೋಮಾರದೇಸಾಯಿ, ರುದ್ರಪ್ಪ ಅರಿವಾಳ, ಸಂಭಾಜಿ ಜಾಧವ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

10/08/2022 09:28 pm

Cinque Terre

7.78 K

Cinque Terre

0

ಸಂಬಂಧಿತ ಸುದ್ದಿ