ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೀತದಂತಹ ಅನಿಷ್ಠ ಪದ್ಧತಿಗಳ ನಿವಾರಣೆಗೆ ಕಾರಣಿಭೂತರು ಡಿ.ದೇವರಾಜ ಅರಸು: ನ್ಯಾಯವಾದಿ ಲೋಹಿತ ನಾಯ್ಕರ್

ಧಾರವಾಡ: ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರು ರೈತಪರ, ಜನಪರ, ಹಿಂದುಳಿದ ವರ್ಗಗಳ ಧ್ವನಿಯಾಗಿದ್ದರು. ಮಲ ಹೊರುವ ಪದ್ಧತಿ, ಜೀತ ಪದ್ಧತಿಗಳ ನಿವಾರಣೆಗೆ ದಿಟ್ಟ ಹೆಜ್ಜೆಯನಿಟ್ಟರು ಎಂದು ಹಿರಿಯ ನ್ಯಾಯವಾದಿ ಲೋಹಿತ ನಾಯ್ಕರ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 107 ನೇ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ವ್ಯಕ್ತಿ-ಶಕ್ತಿಯಾಗಿ ರೂಪುಗೊಂಡಿದ್ದ ಅರಸು ಅವರು ತತ್ವಸಿದ್ಧಾಂತಕ್ಕೆ ಬದ್ಧರಾಗಿದ್ದರು. ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಭೂಮಿಯ ಹಕ್ಕನ್ನು ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾಭಿವೃದ್ಧಿಗೆ ಅರಸು ಅವರ ಕೊಡುಗೆ ಅಪಾರವಾಗಿದೆ. ಕನಿಷ್ಠ ವೇತನ ಪದ್ದತಿ, ಹಿಂದುಳಿದ ವರ್ಗದವರಿಗೆ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸುವುದರೊಂದಿಗೆ ಹಿಂದುಳಿದ ಸಮಾಜವನ್ನು ಮುಂದೆ ತರಲು ಶ್ರಮಿಸಿದರು. ಇದು ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು ಎಂದರು.

ಅಬಕಾರಿ ಇಲಾಖೆಯ ಉಪ ಆಯುಕ್ತೆ ಶಾರದಾ ಕೋಲಕಾರ ಮಾತನಾಡಿ, ಅರಸು ಅವರು ಸಮಾಜದ ಏಳ್ಗೆಗಾಗಿ, ಸಮಾಜದ ಸಮಾನತೆಗಾಗಿ ಹಲವು ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಯನ್ನು ತಂದಿದ್ದಾರೆ. ಅವರು ನೀಡಿರುವ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ಬಡ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಎಂದರು.

ವಸ್ತು ಪ್ರದರ್ಶನ ಮಳಿಗೆಯ ವಸ್ತು ಪ್ರದರ್ಶಕರಿಗೆ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಇಂಧುದರ ಮುತ್ತಳ್ಳಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

Edited By : PublicNext Desk
Kshetra Samachara

Kshetra Samachara

23/08/2022 08:38 pm

Cinque Terre

8.76 K

Cinque Terre

0

ಸಂಬಂಧಿತ ಸುದ್ದಿ