ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ. ಅರ್ಜಿಗಳ ಪರಿಶೀಲನೆ ಸೆಪ್ಟೆಂಬರ್ 16, ಕೌನ್ಸಲಿಂಗ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಸೆಪ್ಟೆಂಬರ್ 20 ರಂದು ಪ್ರಕಟಿಸಲಾಗುವುದು. ಮತ್ತು ಆಯ್ಕೆಯಾದ ವಿದ್ಯಾರ್ಥಿಗಳು ಸೆಪ್ಟೆಂಬರ್ 26 ರೊಳಗೆ ಪ್ರವೇಶ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ dobcmdharwad@gmail.com ಅಥವಾ ದೂರವಾಣಿ 0836-2447961 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
23/08/2022 10:11 pm