ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ದೀಪ ಬೆಳಗಿಸುವ ಹಾಗೂ ಫ್ಲಾರೆನ್ಸ್ ನೈಟಿಂಗೆಲ್ ಪ್ರತಿಜ್ಞಾ ವಿಧಿಯ ಕಾರ್ಯಕ್ರಮವು ಇಂದು ಜರುಗಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗೀಯ ಜಂಟಿ ನಿರ್ದೇಶಕ ಡಾ.ಪ್ರಭು ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸನಗೌಡ ಕರಿಗೌಡರ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ರಾಜೇಂದ್ರ.ಎಂ. ದೊಡ್ಡಮನಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಾಂಶುಪಾಲ ನಾಗರಾಜ ಮೂಲಿಮನಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ವಿದ್ಯಾರ್ಥಿನಿಯರು, ಸಿಬ್ಬಂದಿ ಭಾಗವಹಿಸಿದ್ದರು.
Kshetra Samachara
29/08/2022 08:58 pm