ಧಾರವಾಡ: ತವನಪ್ಪ ಅಷ್ಟಗಿ ಅವರು ಚಿತ್ರದುರ್ಗದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ನಂತರ ಸಾಕಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ.
ಧಾರವಾಡದಲ್ಲೂ ತವನಪ್ಪ ಅಷ್ಟಗಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಸಂಬಂಧಿಸಿದಂತೆ ತಮ್ಮ ಕಚೇರಿಯನ್ನು ತೆರಯುವ ಮೂಲಕ ಜನರಿಗೆ ಹತ್ತಿರವಾಗುವ ಕೆಲಸ ಮಾಡುತ್ತಿದ್ದಾರೆ. ಶನಿವಾರ ಕೊಪ್ಪದ ಕೆರೆಯಲ್ಲಿ ತವನಪ್ಪ ಅಷ್ಟಗಿ ಅವರ ಕಚೇರಿ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಚೇರಿಯನ್ನು ಉದ್ಘಾಟಿಸಿದರು.
ಶಾಸಕ ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿದ್ದರು.
Kshetra Samachara
03/09/2022 09:00 pm