ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ.ಮಲ್ಲಿಕಾರ್ಜುನ ಮನಸೂರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಚಂದ್ರಕಾಂತ ಬೆಲ್ಲದ

ಧಾರವಾಡ: ಡಾ.ಮಲ್ಲಿಕಾರ್ಜುನ ಮನಸೂರ ಅವರ 30 ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಡಾ.ಮನಸೂರ ರಾಷ್ಟ್ರೀಯ ಟ್ರಸ್ಟ್ ವತಿಯಿಂದ ಮನಸೂರ ಅವರ ಮನೆ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರು ಡಾ.ಮಲ್ಲಿಕಾರ್ಜುನ ಮನಸೂರ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಡಾ.ಮಲ್ಲಿಕಾರ್ಜುನ ಮನಸೂರ ಅವರು ಸಂಗೀತ ದಿಗ್ಗಜರು. ಕನ್ನಡ ನಾಡಿನ ಕೀರ್ತಿಯನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಚಿರಾಯುಗೊಳಿಸಿದ್ದಾರೆ. ಅವರ ಅಪಾರ ಸಂಖ್ಯೆಯ ಶಿಷ್ಯ ಬಳಗ ಮನಸೂರ ಅವರ ಹಿಂದೂಸ್ತಾನಿ ಸಂಗೀತ ಪರಂಪರೆಯನ್ನು ಮುಂದುವರಿಸಿದ್ದಾರೆ. ಟ್ರಸ್ಟ್ ಸಂಗೀತ ಶಾಲೆಯ ಮಕ್ಕಳು ಮನಸೂರ ಅವರ ಸಂಗೀತ ಪರಂಪರೆಯನ್ನು ಬೆಳೆಸಬೇಕು ಎಂದರು.

ನಂತರ ಅವರು ಡಾ.ಮಲ್ಲಿಕಾರ್ಜುನ ಮನಸೂರ ಅವರ ಕುರಿತ ವಸ್ತುಸಂಗ್ರಹಾಲಯ ವೀಕ್ಷಿಸಿದರು. ಮತ್ತು ಮನಸೂರ ಸಂಗೀತ ತರಗತಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು.

ಪದ್ಮಶ್ರೀ ಪುರಸ್ಕೃತ ಪಂಡಿತ ಎಂ.ವೆಂಕಟೇಶಕುಮಾರ, ಟ್ರಸ್ಟ್‌ ಸದಸ್ಯರಾದ ಡಾ.ದಿಲೀಪ್ ದೇಶಪಾಂಡೆ, ಶಂಕರ ಕುಂಬಿ, ಕರ್ನಾಟಕ ವಿದ್ಯಾವರ್ಧಕ ಸಂಘ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶಟ್ಟರ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

13/09/2022 10:16 pm

Cinque Terre

11.23 K

Cinque Terre

0

ಸಂಬಂಧಿತ ಸುದ್ದಿ