ಧಾರವಾಡ: ನವದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ ಫೇರ್ ಇವರು ಧೈರ್ಯ ಸಾಹಸ ಮಾಡಿರುವ, ಪ್ರಾಣದ ಹಂಗು ತೊರೆದು ಜೀವ ರಕ್ಷಣೆ ಮಾಡಿರುವ 06 ರಿಂದ 18 ವರ್ಷದೊಳಗಿನ ಮಕ್ಕಳಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ವೆಬ್‍ಸೈಟ್ www.iccw.co.in. ನಲ್ಲಿ ಡೌನ್ಲೋಡ್ ಮಾಡಿಕೊಂಡು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಅಕ್ಟೋಬರ್ 15 ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಬಾಲಭವನ ಕಟ್ಟಡ, ಡಿ.ಸಿ.ಕಂಪೌಂಡ್, ಧಾರವಾಡ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 0836-2447850 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Kshetra Samachara
14/09/2022 09:43 pm