ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಷಿ ಮೇಳ: ವಾಹನಗಳ ಪಾರ್ಕಿಂಗ್ ಎಲ್ಲೆಲ್ಲಿ ಗೊತ್ತಾ?

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆಪ್ಟೆಂಬರ್ 17 ರಿಂದ 20 ರವರೆಗೆ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ. ನಾಲ್ಕು ದಿನಗಳ ಕೃಷಿ ಮೇಳಕ್ಕೆ ವಿವಿಧ ಜಿಲ್ಲೆಯ ಹಾಗೂ ರಾಜ್ಯಗಳಿಂದ ಸುಮಾರು 10-12 ಲಕ್ಷ ರೈತರು, ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದೆ. ಎಲ್ಲ ಜನದಟ್ಟನೆಯನ್ನು ಸುಗಮವಾಗಿ ನಿರ್ವಹಿಸಲು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಸಚಿವ ಶಿವಾನಂದ ಕರಾಳೆ ತಿಳಿಸಿದ್ದಾರೆ.

ಕೃಷಿ ಮೇಳ ಯಶಸ್ವಿಯಾಗಿ ಸಂಘಟಿಸುವ ಉದ್ದೇಶದಿಂದ ವಾಹನ ಸಂಚಾರ ಮತ್ತು ನಿಲುಗಡೆಗೆ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆ. ಧಾರವಾಡದ ಜುಬ್ಲಿ ಸರ್ಕಲ್ ಕಡೆಯಿಂದ ಬರುವ ವಾಹನಗಳಿಗೆ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕ್ರೀಡಾಂಗಣ ಮತ್ತು ಡೇರಿ ವಿಭಾಗಗಳಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ, ಬಾಗಲಕೋಟೆ, ನರಗುಂದ, ನವಲಗುಂದ, ರಾಮದುರ್ಗ, ಗೋಕಾಕ ಮತ್ತು ಸವದತ್ತಿ ಕಡೆಯಿಂದ ಬರುವ ವಾಹನಗಳಿಗೆ ನೇರವಾಗಿ ಮುರಘಾಮಠದಿಂದ ಎತ್ತಿನಗುಡ್ಡದ ಹಿರಿಯ ಪ್ರಾಥಮಿಕ ಶಾಲೆ, ಎತ್ತಿನಗುಡ್ಡ ಮತ್ತು ಪಿ.ಜಿ.ಹಾಸ್ಟೆಲ್ ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಲ್ಲಾಪುರ, ನಿಪ್ಪಾಣಿ, ಸಂಕೇಶ್ವರ, ಚಿಕ್ಕೋಡಿ ಮತ್ತು ಬೆಳಗಾವಿ ಕಡೆಯಿಂದ ಬರುವ ವಾಹನಳಿಗೆ ಬೈಪಾಸ್ ಹತ್ತಿರ ಏರ್ ಟೆಕ್ ಕಂಪೆನಿ ಪಕ್ಕದಲ್ಲಿ ಖಾಲಿ ಇರುವ ಜಾಗದಲ್ಲಿ ಮತ್ತು ಬಸವನಗರದ ಖಾಲಿ ಇರುವ ಜಾಗದಲ್ಲಿ ವಾಹನ ನಿಲುಗಡೆಗೆ ಸುವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ ನಿಲುಗಡೆ ಸ್ಥಳದಲ್ಲಿ ಪೋಲಿಸ್ ಅಧಿಕಾರಿಗಳಿಗಾಗಿ ಟೆಂಟ್, ಮೈಕ್, ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ತವ್ಯದ ಮೇಲಿದ್ದ ಸಂಚಾರಿ ಪೊಲೀಸ್ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಊಟದ ವ್ಯವಸ್ಥೆ ಮಾಡಲಾಗಿದೆ. ಕೃಷಿ ವಿಶ್ವವಿದ್ಯಾಲಯದ ಮುಖ್ಯದ್ವಾರದ ಎದುರಿನ ಹಳೇ ಎನ್‍ಎಚ್4 ಹೆದ್ದಾರಿಯಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸದೇ ಸುಗಮ ಸಂಚಾರ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

14/09/2022 09:54 pm

Cinque Terre

12.65 K

Cinque Terre

0

ಸಂಬಂಧಿತ ಸುದ್ದಿ