ಧಾರವಾಡ: ಧಾರವಾಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ಅಲ್ಪಸಂಖ್ಯಾತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳಿಗೆ ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಪ್ರತಿ ತಿಂಗಳಿಗೆ 1500 ರಂತೆ ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ಜಮಾ ಮಾಡುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು https://sevasindhu.karnataka.gov.in ಆನ್‍ಲೈನ್ ಮೂಲಕ ಅಕ್ಟೋಬರ್ 20 ರೊಳಗಾಗಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಗಳ ಪ್ರತಿಗಳನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಜಿಲ್ಲೆಯ ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯಾಲಯದಲ್ಲಿ ಮತ್ತು ಅಲ್ಪಸಂಖ್ಯಾತರ ಆಯಾ ತಾಲ್ಲೂಕು ಅರಿವು ಕೇಂದ್ರಗಳಲ್ಲಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ 0836-2971590 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
20/09/2022 09:24 pm