ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನ.12ರಂದು ರಾಷ್ಟ್ರೀಯ ಲೋಕ ಅದಾಲತ್

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ನವೆಂಬರ್ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಲೋಕ್ ಅದಾಲತ್‍ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಎಲ್ಲ ಪ್ರಕರಣಗಳನ್ನು ಹಾಗೂ ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಬ್ಯಾಂಕ್, ಕಾರ್ಮಿಕರು, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು, ಕಕ್ಷಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬಹುದು ಎಂದು ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇವರಿಂದ ನಿರ್ದೇಶನದ ಮೇರೆಗೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

07/10/2022 09:45 pm

Cinque Terre

13 K

Cinque Terre

0

ಸಂಬಂಧಿತ ಸುದ್ದಿ