ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ

ಧಾರವಾಡ: ಎಪಿಎಂಸಿ ತಿದ್ದುಪಡಿ ಕಾಯ್ದೆ ಮತ್ತು ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡಸಿದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಅನ್ನದಾತರ ಮೇಲೆ ಜಲಪಿರಂಗಿ ಹಾಗೂ ಟಿಯರ್ ಗ್ಯಾಸ್ ಬಿಡುವ ಮೂಲಕ ಅಮಾನವೀಯತೆ ಮೆರೆಯುತ್ತಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

02/12/2020 01:20 pm

Cinque Terre

13.82 K

Cinque Terre

2