ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಣಮಟ್ಟದ ಚಿಕಿತ್ಸೆ ಪಡೆದು ಕ್ಯಾನ್ಸರ್ ರೋಗದಿಂದ ರಕ್ಷಿಸಿಕೊಳ್ಳಿ

ಧಾರವಾಡ: ಕ್ಯಾನ್ಸರ್ ಕಾಯಿಲೆ ಬಂದಾಗ ಅಥವಾ ಅದರ ಲಕ್ಷಣ ಕಂಡು ಬಂದಾಗ ಮಾನಸಿಕವಾಗಿ ಕುಗ್ಗದೇ, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಗುವ ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯುವ ಮೂಲಕ ಕ್ಯಾನ್ಸರ್ ರೋಗದಿಂದ ರಕ್ಷಿಸಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಸಿ.ಕರಿಗೌಡರ ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಎನ್.ಸಿ.ಡಿ ಕ್ಲಿನಿಕ್ ಮತ್ತು ಜಿಲ್ಲಾ ಆಸ್ಪತ್ರೆ ಸಂಯುಕ್ತವಾಗಿ ಜಿಲ್ಲಾ ಆಸ್ಪತ್ರೆಯ ಎನ್‍ಸಿಡಿ ಘಟಕದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಕ್ಯಾನ್ಸರ್ ರೋಗ ಬರದೇ ಹಾಗೂ ಬಂದ ಮೇಲೆ ಮಾನಸಿಕವಾಗಿ ಹೆದರದೇ ಆರೋಗ್ಯ ತಪಾಸಣೆ ಹಾಗೂ ಸಮಗ್ರ ಚಿಕಿತ್ಸೆ ಪಡೆಯುವುದರ ಮೂಲಕ ಎದರಿಸಬಹುದು. ರಾಜ್ಯ ಮತ್ತು ಕೆಂದ್ರ ಸರ್ಕಾರವು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲು ಉತ್ತಮ ಗುಣಮಟ್ಟದ ಮೂಲಸೌಕರ್ಯಗಳನ್ನು ಪೂರೈಸಿವೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಸಾರ್ವಜನಿಕರಿಗೆ ವಿವರವಾಗಿ ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ಸಾಲಿಗೆ "ಆರೈಕೆಯ ಅಂತರವನ್ನು ಕಡಿತಗೊಳಿಸಿ" ಎಂಬ ಘೋಷ ವಾಕ್ಯವನ್ನು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಘೋಷಿಸಲಾಗಿದೆ. ಕ್ಯಾನ್ಸರ್ ಸಂಬಂಧಿ ಕಾಯಿಲೆ ಹರಡುವಿಕೆ ಹಾಗೂ ಅದರ ನಿಯಂತ್ರಣವನ್ನು ನಿಯಮಿತ ಆರೋಗ್ಯ ತಪಾಸಣೆಯಿಂದ ತಡೆಗಟ್ಟಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಕುಮಾರ ಮಾನಕರ ಮಾತನಾಡಿದರು. ಕಾರ್ಯಕ್ರಮದಲ್ಲಿ, ಜಿಲ್ಲಾ ಐ.ಇ.ಸಿ ವಿಭಾಗ ಸಿಬ್ಬಂದಿ, ಜಿಲ್ಲಾ ಆಸ್ಪತ್ರೆಯ ವೈದ್ಯಧಿಕಾಗಳು ಹಾಗೂ ಶೂಶ್ರೂಷಕ ಸಿಬ್ಬಂದಿಯವರು, ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಿಬ್ಬಂದಿ ಹಾಗೂ ಎನ್.ಸಿ.ಡಿ ಕಾರ್ಯಕ್ರಮದ ಎಲ್ಲ ಸಿಬ್ಬಂದಿಯವರು ಉಪಸ್ಥಿತಿ ಇದ್ದರು.

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ ಮತ್ತು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಅವರು ಬಲೂನಗಳನ್ನು ಹಾರಿಸಿದರು ಮತ್ತು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

Edited By : PublicNext Desk
Kshetra Samachara

Kshetra Samachara

09/02/2022 09:50 pm

Cinque Terre

5.48 K

Cinque Terre

0