ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ನವಲಗುಂದದಲ್ಲಿ ಸಂಪೂರ್ಣ ಬಂದ್ ಗೆ ಕರೆ ಕೊಟ್ಟಿದ್ದೇವೆ; ಲೋಕನಾಥ ಹೆಬಸೂರ

ನವಲಗುಂದ : ಕೃಷಿ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಇದಕ್ಕೆ ನವಲಗುಂದದಲ್ಲಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ಸಂಪೂರ್ಣ ಬೆಂಬಲ ಇದೆ ಎಂದು ಅಧ್ಯಕ್ಷರಾದ ಲೋಕನಾಥ ಹೆಬಸೂರ ತಿಳಿಸಿದರು.

ಇನ್ನು ಮಾತನಾಡಿದ ಅವರು, ಕೃಷಿ ಕಾಯ್ದೆ ವಿರೋಧಿಸಿ ಕಳೆದ ಒಂದು ವರ್ಷಗಳಿಂದ ದೆಹಲಿಯಲ್ಲಿ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದರೂ ಸಹ ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸದೆ, ತಿದ್ದು ಪಡಿ ಅಂಗೀಕಾರವನ್ನು ಕೈ ಬಿಡಬೇಕು ಎಂದು ನಡೆಯುತ್ತಿರುವ ಒತ್ತಾಯಕ್ಕೆ ಇಂದಿಗೂ ಸ್ಪಷ್ಟವಾದ ನಿಲುವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ, ಆದರಿಂದ ಕಾಯ್ದೆ ವಾಪಸ್ ಪಡೆಯಲು ಒತ್ತಾಯಿಸಿ ನಡೆಯುತ್ತಿರುವ ಭಾರತ್ ಬಂದ್ ಗೆ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ಸಂಪೂರ್ಣ ಬೆಂಬಲ ನೀಡುತ್ತ ನವಲಗುಂದನಲ್ಲಿ ಸಂಪೂರ್ಣ ಬಂದ್ ಗೆ ಕರೆ ಕೊಟ್ಟಿದ್ದೇವೆ ಎಂದು ಭಾನುವಾರ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ಅಧ್ಯಕ್ಷರಾದ ಲೋಕನಾಥ ಹೆಬಸೂರ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

26/09/2021 04:31 pm

Cinque Terre

25.05 K

Cinque Terre

0

ಸಂಬಂಧಿತ ಸುದ್ದಿ