ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರಸ್ತೆ ತಡೆದು ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಕೋನರಡ್ಡಿ

ನವಲಗುಂದ : ನವಲಗುಂದ ಸೇರಿದಂತೆ ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದಾಗಿ ಮುಂಗಾರು ಹಾಗೂ ಹಿಂಗಾರು ಬೆಳೆಗಳು ಹಾನಿಯಾಗಿದ್ದು, ರೈತರಿಗೆ ಬೆಳೆವಿಮೆ ಪರಿಹಾರ‌ ಕೂಡಲೇ ನೀಡಬೇಕು ಎಂದು ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಅವರ ನೇತೃತ್ವದಲ್ಲಿ ಪಟ್ಟಣದ ನೀಲಮ್ಮನ ಕೆರೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಹೌದು ರೈತರು ಬೆಳೆದ ಮೆಣಸಿನಕಾಯಿ, ಹತ್ತಿ, ಈರುಳ್ಳಿ, ಗೋವಿನಜೋಳ ಇತರೆ ಬೆಳೆಗಳಿಗೆ ಹಾನಿಯಾಗಿದ್ದು ಮತ್ತೇ ಸುರಿದ ಮಳೆಯಿಂದ ಬೆಳೆಗಳು ನೀರಿನಲ್ಲಿ ನಿಂತು ಸಂಪೂರ್ಣ ಕೊಳೆತು ಹೋಗಿದ್ದು, ರೈತರು ಆರ್ಥಿಕವಾಗಿ ಕುಗ್ಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಖಾಸಗಿ ಬೆಳೆವಿಮಾ ಕಂಪನಿಯವರು ಹಿಂಗಾರು ಬೆಳೆಗೆ ಮಾತ್ರ ಅರ್ಜಿ ಸ್ವೀಕರಿಸುತ್ತಿದ್ದು, ಮುಂಗಾರು ಬೆಳೆ ಹಾನಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ಇನ್ನು ಸ್ವೀಕರಿಸಿದ ಅರ್ಜಿಗಳಿಗೆ ಯಾವುದೇ ತರಹದ ಸ್ವೀಕೃತಿ ಅಥವಾ ರಿಜಿಸ್ಟರ್‌ನಲ್ಲಿ ನೊಂದಾಯಿಸದೇ ಇರುವುದರಿಂದ ಪರಿಹಾರ‌ ಸಿಗುತ್ತದೆ ಎಂಬುದು ಯಕ್ಷಪ್ರಶ್ನೆಯಾಗಿದೆ.

ಹೀಗಾಗಿ ಹಿಂಗಾರು ಹಾಗೂ ಮುಂಗಾರು ಬೆಳೆಹಾನಿಯಾದ ರೈತರಿಗೆ ಖಾಸಗಿ ವಿಮಾ ಕಂಪನಿ ಹಾಗೂ ಸರ್ಕಾರದಿಂದ ತಕ್ಷಣ ಬೆಳೆ ಪರಿಹಾರ ನೀಡಬೇಕೆಂದು ನವಲಗುಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

Edited By : PublicNext Desk
Kshetra Samachara

Kshetra Samachara

04/12/2021 01:04 pm

Cinque Terre

17.03 K

Cinque Terre

0

ಸಂಬಂಧಿತ ಸುದ್ದಿ