ನವಲಗುಂದ : ಎರಡನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರಕ್ಕೆ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ರೈತ ಹೋರಾಟ ಸಮಿತಿ ಬೆಂಬಲ ನೀಡಿದ್ದು, ನವಲಗುಂದದ ಬಸ್ ನಿಲ್ದಾಣದಲ್ಲಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂಬ ಹಲವು ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ರೈತ ಹೋರಾಟ ಸಮಿತಿಯು ಸಾರಿಗೆ ನೌಕರರ ಪ್ರತಿಭಟನೆಗೆ ಬೆಂಬಲವನ್ನು ನೀಡಿದರು. ಇನ್ನೂ ಈ ವೇಳೆ ಅಧ್ಯಕ್ಷ ಸಿದ್ದಪ್ಪ ಮುಪ್ಪಯ್ಯ ನವರ, ಸುಭಾಷ್ ಚಂದ್ರಗೌಡ ಪಾಟೀಲ, ಮಲ್ಲೇಶ್ ಉಪ್ಪಾರ, ರವಿಗೌಡ ಪಾಟೀಲ, ರಘುನಾಥ ಸೇರಿದಂತೆ ಹಲವರು ಭಾಗಿಯಾಗಿದ್ದರು.
Kshetra Samachara
12/12/2020 03:43 pm