ನವಲಗುಂದ : ಓಮೈಕ್ರಾನ್ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾತ್ರಿ ಹತ್ತು ಗಂಟೆಯಾಗುತ್ತಲೇ ನವಲಗುಂದ ಪಟ್ಟಣದ ಅಂಗಡಿ-ಮುಂಗಟ್ಟುಗಳಿಗೆ ಬೀಗ ಜಡಿಯಲಾಗಿದೆ.
ಹೌದು ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ನೈಟ್ ಕರ್ಫ್ಯೂ ಜಾರಿಯಾಗಿದ್ದು, ಅನಾವಶ್ಯಕವಾಗಿ ರಸ್ತೆಗೆ ಇಳಿಯುವವರ ಮೇಲೆ ಕ್ರಮಕೈಗೊಳ್ಳಲಾಗುವುದು. ಇನ್ನು ನವಲಗುಂದ ಪಟ್ಟಣದ ಮಾರುಕಟ್ಟೆ 10 ಗಂಟೆಯ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಜನರ ಓಡಾಟಕ್ಕೂ ಬ್ರೇಕ್ ಹಾಕಲಾಗಿತ್ತು.
Kshetra Samachara
28/12/2021 11:10 pm