ಧಾರವಾಡ: ತಾಂಡವ ಹಿಂದಿ ಚಲನಚಿತ್ರದಲ್ಲಿ ಹಿಂದೂ ದೇವತೆಗಳಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರವಾಡದ ಜುಬ್ಲಿ ವೃತ್ತದಲ್ಲಿ ಪ್ರತಿಭಟನಾಕಾರರು ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕರ ಪ್ರತಿಕೃತಿ ದಹಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ನಟ, ನಟಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿದರು. ಕೂಡಲೇ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಚಲನಚಿತ್ರದ ಕಾರ್ಯಚಟುವಟಿಕೆಗಳನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.
Kshetra Samachara
19/01/2021 05:04 pm