ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ತರಕಾರಿ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರಿಸಿದ ಹಿನ್ನಲೆ: ಕೃತಜ್ಞತೆ ಪತ್ರ ನೀಡಿದ ಸಂಘಟನೆಗಳು

ನವಲಗುಂದ : ಈಗಾಗಲೇ ನವಲಗುಂದ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿ ಗೆ ಸ್ಥಳಾಂತರಿಸಿದ್ದು, ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದು ಶುಕ್ರವಾರ ಜಯ ಕರ್ನಾಟಕ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಾಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.

ಈಗಾಗಲೇ ಹಲವು ಬಾರಿ ಗಾಂಧೀ ಮಾರುಕಟ್ಟೆಯಲ್ಲಿನ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿಗೆ ಸ್ಥಳಾಂತರಿಸಲು ಮನವಿ ನೀಡಲಾಗಿದ್ದು, ಈಗ ಪುರಸಭೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಎಪಿಎಂಸಿಗೆ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಿದ್ದಾರೆ. ಇದರಿಂದ ಮಾರುಕಟ್ಟೆಯ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದು ಜಯ ಕರ್ನಾಟಕ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸಂತಸ ವ್ಯಕ್ತಪಡಿಸಿ, ಪುರಸಭೆ ಮುಖ್ಯ ಅಧಿಕಾರಿ ಮತ್ತು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಕೃತಜ್ಞತೆ ಪತ್ರವನ್ನು ನೀಡಿದರು.

Edited By : Nagaraj Tulugeri
Kshetra Samachara

Kshetra Samachara

05/02/2021 06:44 pm

Cinque Terre

12.67 K

Cinque Terre

0

ಸಂಬಂಧಿತ ಸುದ್ದಿ