ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಕುಂದಗೋಳ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಒಳಾಂಗಣದಲ್ಲಿ ಇದ್ದು ಬೆಳಿಗ್ಗೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು ಈ ಅವಘಡ ಹೇಗೆ ಸಂಭವಿಸಿತು ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ.

ಬೆಂಕಿ ಅವಘಡಕ್ಕೆ ಸಿಲುಕಿ ಆಸ್ಪತ್ರೆ ಪಿಠೋಪಕರಣ ಹಾಗೂ ಮೆಡಿಸಿನ್ ಸುಟ್ಟು ಹೋಗಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಿ ಹಾನಿ ಸಂಭವಿಸಿಲ್ಲ.

ಆಸ್ಪತ್ರೆ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿಗಳು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದು ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

27/02/2021 11:20 am

Cinque Terre

36.43 K

Cinque Terre

1

ಸಂಬಂಧಿತ ಸುದ್ದಿ