ನವಲಗುಂದ : ನವಲಗುಂದ ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯಿಂದ ಲಾರಿ ಒಂದು ಕೆಟ್ಟುನಿಂತ ಪರಿಣಾಮ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿತ್ತು.
ಹೌದು. ಪಟ್ಟಣದ ಬಸ್ ನಿಲ್ದಾಣದ ಎದುರೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದಿಂದ ಹೊರಗೆ ಬರುವಾಗ ಬಸ್ ಸಂಚಾರಕ್ಕೆ ಸಾಕಷ್ಟು ತೊಡಕುಂಟಾಗಿತ್ತು. ಹೀಗಾಗಿ ಪೊಲೀಸ್ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ, ಟ್ರಾಫಿಕ್ ಸಮಸ್ಯೆ ಬಗೆಹರಿಸಿ, ಲಾರಿಯನ್ನು ಜೆಸಿಬಿ ಸಹಾಯದಿಂದ ಬೇರೆಡೆಗೆ ಸಾಗಿಸಿದರು.
Kshetra Samachara
24/12/2021 01:35 pm